HomeKarnatakaಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಆಸ್ಪತ್ರೆ ಕಟ್ಟಡ ಏರಿದ ಗ್ರಾಮ ಪಂಚಾಯಿತಿ ಅಧ್ಯಕ್ಷ....!

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಆಸ್ಪತ್ರೆ ಕಟ್ಟಡ ಏರಿದ ಗ್ರಾಮ ಪಂಚಾಯಿತಿ ಅಧ್ಯಕ್ಷ….!

ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಆಸ್ಪತ್ರೆ ಕಟ್ಟಡ ಏರಿ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.

ಮೂಡುಗುಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟನೆ ನಡೆಸಿದವರಾಗಿದ್ದು, ಹೋಬಳಿ ಕೇಂದ್ರವಾಗಿರುವ ನಗರದ ಸರ್ಕಾರಿ ಸಂಯುಕ್ತ ಆಸ್ಪತ್ರೆಯಲ್ಲಿ ಖಾಯಂ ವೈದ್ಯರನ್ನು ನೇಮಕ ಮಾಡಿಲ್ಲ ಎಂದು ಆರೋಪಿಸಿದರು.

ಮಂಗಳವಾರ ಬೆಳಿಗ್ಗೆ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಸರ್ಕಾರಿ ಆಸ್ಪತ್ರೆಯ ಕಟ್ಟಡ ಏರಿದ ಕರುಣಾಕರ ಶೆಟ್ಟಿ, ಖಾಯಂ ವೈದ್ಯರ ನೇಮಕವಾಗುವವರೆಗೂ ಕೆಳಗಿಳಿಯುವುದಿಲ್ಲವೆಂದು ಪಟ್ಟು ಹಿಡಿದಿದ್ದರು. ಬಳಿಕ ತಾಲೂಕು ವೈದ್ಯಾಧಿಕಾರಿ ಭೇಟಿ ನೀಡಿ ಮನವೊಲಿಸಿದ ನಂತರ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular