
ತಿಪಟೂರಿನ ಕೆ.ಆರ್. ಬಡಾವಣೆಯಲ್ಲಿ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವನವನ್ನು ನಿರ್ಮಿಸಲಾಗಿದ್ದು, ಹತ್ತು ವರ್ಷದ ಹಿಂದೆ ಯಡಿಯೂರಪ್ಪನವರು ಒಂದೂವರೆ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವ ಮೂಲಕ ಈ ರಂಗ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದರು.
ನಾಟಕಗಳ ಅಭ್ಯಾಸಕ್ಕಾಗಿ ಈ ರಂಗಮಂದಿರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪರ ಊರುಗಳಿಂದ ಬರುವ ಕಲಾವಿದರು ಉಳಿದುಕೊಳ್ಳಲು ಕೊಠಡಿಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ಕೆಳ ಮಹಡಿಯಲ್ಲಿ ಆರ್ಟ್ ಗ್ಯಾಲರಿಗೆ ಅವಕಾಶ ನೀಡಲಾಗಿದ್ದು, ಕಲಾ ಪ್ರದರ್ಶನಗಳನ್ನು ಏರ್ಪಡಿಸಲು ಅನುಕೂಲಕರವಾಗಿದೆ.

