HomeAgricultureಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್, ಕರಾವಳಿಯ ಎಲ್ಲ ಜಿಲ್ಲೆಗಳು, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಏಪ್ರಿಲ್ 10 ರಂದು ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಏಪ್ರಿಲ್ 11ರಂದು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular