
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

