HomeKarnatakaಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ 'ಬಂದ್'

ಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ‘ಬಂದ್’

ಪ್ರಸ್ತುತ ಗಣೇಶ ವಿಸರ್ಜನೆ ನಡೆಯುತ್ತಿದ್ದು, ಇದರ ಜೊತೆಗೆ ಈದ್ ಮಿಲಾದ್ ಹಬ್ಬವೂ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲವೊಂದು ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಾಹನ ಸಂಚಾರ ಕುರಿತಂತೆ ಈಗಾಗಲೇ ಶಿವಮೊಗ್ಗ ಜಿಲ್ಲಾಧಿಕಾರಿಯವರು ಸೂಚನೆಗಳನ್ನು ಹೊರಡಿಸಿದ್ದು, ಇದರ ಮಧ್ಯೆ ಮದ್ಯ ಮಾರಾಟ ನಿಷೇಧ ಕುರಿತಂತೆ ನಿರ್ಬಂಧಗಳನ್ನು ಹೇರಲಾಗಿದೆ.

ಪರಿಷ್ಕೃತ ಆದೇಶದಂತೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರ ಸಂಜೆ 6 ಗಂಟೆಯಿಂದ ಸೆಪ್ಟೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಅದೇ ರೀತಿ ಸೆಪ್ಟೆಂಬರ್ 30ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 2ರ ಬೆಳಿಗ್ಗೆ 6 ಗಂಟೆವರೆಗೆ ಮದ್ಯ ಮಾರಾಟದ ಮೇಲೆ ನಿರ್ಬಂಧ ಹೇರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular