ಗಮನಿಸಿ: ಏಪ್ರಿಲ್ 12 ರಿಂದ 20 ರ ವರೆಗೆ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಮಳೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಏಪ್ರಿಲ್ 12ರಿಂದ 20ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಈ ಕುರಿತಂತೆ ವಿವರವಾದ ಮಾಹಿತಿಯನ್ನು ಪ್ರಕಟಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ, ತುಮಕೂರಿನ ಮಧ್ಯ ಹಾಗೂ ಪೂರ್ವ ಭಾಗದ ತಾಲೂಕುಗಳು, ರಾಮನಗರದ ಮಧ್ಯಭಾಗ, ಕೊಪ್ಪಳದ ಪೂರ್ವ ಭಾಗ, ರಾಯಚೂರಿನ ದಕ್ಷಿಣ ಭಾಗದ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಗುರುತಿಸಲಾಗಿದೆ.

ಹಾಗೆಯೇ ಗೋಕಾಕ್, ಕಿತ್ತೂರು, ಕಲಬುರಗಿ, ದಕ್ಷಿಣ ಕನ್ನಡದ ಪೂರ್ವ ಭಾಗಗಳು, ರಾಮನಗರ, ಕುಣಿಗಲ್, ತುಮಕೂರು ಜಿಲ್ಲೆಯ ಪಶ್ಚಿಮ ಭಾಗದ ಪ್ರದೇಶಗಳಾದ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ, ಸಂಡೂರು, ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕುನೂರು, ಯಲಬುರ್ಗಾ, ಕುಷ್ಟಗಿ, ಗಜೇಂದ್ರಗಡ, ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ಹುನಗುಂದ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಬಾಗೇವಾಡಿ, ತಾಳಿಕೋಟೆ, ದೇವರ ಹಿಪ್ಪರಗಿ, ಸಿಂಧಗಿ, ಇಂಡಿ, ಚಡಚಣ, ಕಲಬುರಗಿ ಜಿಲ್ಲೆಯ ಚಿತ್ತಾಪುರ, ಜೇವರ್ಗಿ, ಅಫ್ಜಲ್ಪುರ, ಕಮಲಾಪುರ, ಸೇಡಂ, ಚಿಂಚೋಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಇನ್ನು ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read