
ಮಳೆ ಇಂದೂ ಕೂಡ ಮುಂದುವರಿಯುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಜೊತೆಗೆ ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

