
ಇದರ ಜೊತೆಗೆ ಹೈಕೋರ್ಟ್, ಅಂದು ಎಲ್ಲ ನ್ಯಾಯಾಲಯಗಳಿಗೆ ರಜೆ ಘೋಷಿಸಿದ್ದು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶದಂತೆ ರಿಜಿಸ್ಟ್ರಾರ್ ಜನರಲ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಮೇ 10ರ ಬುಧವಾರದಂದು ರಾಜ್ಯದ ತಾಲೂಕು, ಜಿಲ್ಲಾ ನ್ಯಾಯಾಲಯಗಳು, ಹೈಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

