ಗಮನಿಸಿ: ಮುಂದಿನ 3 ಗಂಟೆಯಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ‘ಮಳೆ’ ಮುನ್ಸೂಚನೆ

ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ (rain)ಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department)
ಮುನ್ಸೂಚನೆ ನೀಡಿದೆ.

ಹೌದು, ಇಂದು ಸೋಮವಾರವೂ ಕೂಡ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಭಾರಿ ಮಳೆ (heavy rain) ಯಾಗುವ ಸಾಧ್ಯತೆ ಇದೆ.

ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು (Fishermen) ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಹಲವು ಕಡೆ ಗಂಟೆಗೊಂದು ವಾತಾವರಣವಿದ್ದು, ಕೆಲವು ಕಡೆ ಧಗ ಧಗಿಸುವ ಬಿಸಿಲಿದ್ದರೆ, ಕೆಲವು ಕಡೆ ಮೋಡ ಕವಿದ ವಾತಾವರಣವಿದೆ. ಇನ್ನೂ, ರಾಜ್ಯಕ್ಕೆ ಮುಂಗಾರು ಪ್ರವೇಶ (Monsoon entry)ಕೂಡ ವಿಳಂಬವಾಗಲಿದ್ದು, ಹಲವು ಕಡೆ ಕೆರೆಕಟ್ಟೆ, ಬಾವಿಗಳು ಬತ್ತಿ ಹೋಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read