ಗಮನಿಸಿ: ಮೇ 15ರಿಂದ ಅಂಗನವಾಡಿಗಳಿಗೆ ‘ಬೇಸಿಗೆ’ ರಜೆ

ಅಂಗನವಾಡಿ ಕೇಂದ್ರಗಳಿಗೆ ಮೇ 15 ರಿಂದ ಮೇ 29 ರವರೆಗೆ ಬೇಸಿಗೆ ರಜೆ ಘೋಷಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಆದೇಶ ಹೊರಡಿಸಿದೆ.

ಮೇ 1ರಿಂದಲೇ ಅಂಗನವಾಡಿಗಳಿಗೆ ಬೇಸಿಗೆ ರಜೆ ಆರಂಭವಾಗಬೇಕಿತ್ತಾದರೂ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಮೇ 15ರಿಂದ 29 ರವರೆಗೆ ಬೇಸಿಗೆ ರಜೆ ಮಂಜೂರು ಮಾಡಿ ಆದೇಶಿಸಲಾಗಿದೆ.

ಮೇ 15ರ ಸೋಮವಾರದಿಂದ ಅಂಗನವಾಡಿಗಳಿಗೆ ರಜೆ ಆರಂಭವಾಗಲಿದ್ದು, ಆದರೆ ಈ ಅವಧಿಯಲ್ಲಿ ಫಲಾನುಭವಿಗಳ ಮನೆ ಬಾಗಿಲಿಗೆ ಪೂರಕ ಪೌಷ್ಟಿಕ ಆಹಾರ ವಿತರಿಸಲು, ಚುಚ್ಚುಮದ್ದು, ಆರೋಗ್ಯ ತಪಾಸಣೆಗಾಗಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕರೆತರಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read