ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17ರವರೆಗೆ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆ ನಡೆದಿದೆ.
ಇದರ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಲಾಗಿದ್ದು, ಯಲಹಂಕ ಏರ್ ಫೋರ್ಸ್ ಸ್ಟೇಷನ್ ಸುತ್ತಮುತ್ತ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಜನವರಿ 30 ರಿಂದ ಫೆಬ್ರವರಿ 20ರವರೆಗೆ, ನಾನ್ ವೆಜ್ ಹೋಟೆಲ್ ಬಂದ್ ಮಾಡುವುದರ ಜೊತೆಗೆ ಚಿಕನ್, ಮಟನ್, ಮೀನು ಮಾರಾಟ ಅಂಗಡಿಗಳನ್ನು ಸಹ ಮುಚ್ಚಲು ಸೂಚಿಸಲಾಗಿದೆ.
ಮಾಂಸದ ತುಣುಕುಗಳನ್ನು ಹೆಕ್ಕಲು ಹಕ್ಕಿಗಳು ಬಂದರೆ ವಿಮಾನಗಳ ಹಾರಾಟಕ್ಕೆ ತೊಂದರೆ ಆಗಬಹುದು ಎಂಬ ಹಿನ್ನೆಲೆಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.