HomeKarnatakaಗಮನಿಸಿ: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಗಮನಿಸಿ: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಬಿರು ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಮಧ್ಯೆ ಹವಾಮಾನ ಇಲಾಖೆ, ಇಂದಿನಿಂದ ಐದು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.

ಹಾಗೆಯೇ ಮಾರ್ಚ್ 16 ರಿಂದ ಮಾರ್ಚ್ 18ರ ವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಬಳ್ಳಾರಿ, ಗದಗ, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಮಾರ್ಚ್ 17 ರಿಂದ 18 ರ ವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular