HomeAgricultureಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ.

ಇದರ ಮಧ್ಯೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಒಂದಷ್ಟು ತಂಪು ನೀಡುತ್ತಿದೆ. ಇಂದೂ ಕೂಡ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular