HomeKarnatakaಗೋವಿಂದರಾಜ ನಗರ ಕ್ಷೇತ್ರಕ್ಕೆ 'ಕೈ' ಅಭ್ಯರ್ಥಿ ಘೋಷಣೆ; ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಗೋವಿಂದರಾಜ ನಗರ ಕ್ಷೇತ್ರಕ್ಕೆ ‘ಕೈ’ ಅಭ್ಯರ್ಥಿ ಘೋಷಣೆ; ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು - ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಶನಿವಾರದಂದು ತನ್ನ ಮೊದಲ ಪಟ್ಟಿ ಪ್ರಕಟಿಸಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದೆ. ಮೊದಲ ಪಟ್ಟಿಯಲ್ಲಿಯೇ ಇತ್ತೀಚೆಗಷ್ಟೇ ಪಕ್ಷ ಸೇರ್ಪಡೆಗೊಂಡವರಿಗೂ ಮಣೆ ಹಾಕಲಾಗಿದೆ.

ಸಚಿವ ಕೆ. ನಾರಾಯಣಗೌಡ ಪ್ರತಿನಿಧಿಸುತ್ತಿರುವ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಯನ್ನು ಘೋಷಿಸಿಲ್ಲವಾದ ಕಾರಣ ನಾರಾಯಣಗೌಡ, ಕಾಂಗ್ರೆಸ್ ಸೇರ್ಪಡೆಗೊಂಡು ಆ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ವಸತಿ ಸಚಿವ ವಿ. ಸೋಮಣ್ಣ ಕೂಡ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಕೇಳಿ ಬಂದಿತ್ತಾದರೂ ಅದನ್ನು ಅವರು ನಿರಾಕರಿಸಿದ್ದರು. ಇದೀಗ ಮೊದಲ ಪಟ್ಟಿಯಲ್ಲಿ ವಿ. ಸೋಮಣ್ಣ ಪ್ರತಿನಿಧಿಸುವ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರಿಯ ಕೃಷ್ಣ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿದ್ದು, ಹೀಗಾಗಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ ಬಿದ್ದಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular