ಗ್ಯಾರಂಟಿ ಘೋಷಣೆಯಿಂದ ಆರ್ಥಿಕವಾಗಿ ರಾಜ್ಯ ದಿವಾಳಿಯಾಗಲಿದೆ: ಕೇಂದ್ರ ಸಚಿವ ಭಗವಂತ ಖೂಬಾ

ನವದೆಹಲಿ : ಗ್ಯಾರಂಟಿ ಘೋಷಣೆಗಳನ್ನು (Guarantee Announcement) ಕೊಟ್ರೆ ರಾಜ್ಯ ದಿವಾಳಿಯಾಗಲಿದೆ, ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಗ್ಯಾರಂಟಿ ಘೋಷಣೆ ಮಾಡಬೇಕಿತ್ತು ಎಂದು ಕೇಂದ್ರ ಸಚಿವ ಭಗವಂತ ಖೂಬಾ (Union Minister Bhagwant Khuba) ರಾಜ್ಯ ಸರ್ಕಾರ(State Government)ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದು 25 ದಿನಕ್ಕೆ ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ನವರು ಜನರಿಗೆ ಟೋಪಿ ಹಾಕಿ ಕುತಂತ್ರದಿಂದ ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿ ಘೋಷಣೆ ಮಾಡಿ ಈಗ ಹಪಹಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ 59 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ರಾಜ್ಯದ ಮೂಲಭೂತ ಸೌಕರ್ಯಗಳನ್ನು ಹೇಗೆ ಈಡೇರಿಸುತ್ತೀರಾ? ಆರ್ಥಿಕವಾಗಿ ರಾಜ್ಯ ದಿವಾಳಿಯಾಗಲಿದೆ. ಆರ್ಥಿಕ ಪರಿಸ್ಥಿತಿ ಅರ್ಥ ಮಾಡಿಕೊಂಡು ಗ್ಯಾರಂಟಿ ಘೋಷಿಸಬೇಕಿತ್ತು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read