‘ಗ್ಯಾರಂಟಿ ಯೋಜನೆಗಳು’ ನಮಗೆ ಸಿಗಲ್ಲ ಎಂದು ಜನರಿಗೆ ಈಗ ಅರ್ಥ ಆಗುತ್ತಿದೆ; ಸಂಸದ ಪ್ರತಾಪ್ ಸಿಂಹ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಸದ ಪ್ರತಾಪ್ ಸಿಂಹ (Pratap Simha) ವಾಗ್ಧಾಳಿ ನಡೆಸಿದ್ದಾರೆ.
ಚುನಾವಣೆಯಲ್ಲಿ ಗೆದ್ದ ಬಳಿಕ ಕಾಂಗ್ರೆಸ್ ವರಸೆ ಬದಲಾಗಿದೆ, ಗ್ಯಾರಂಟಿ ಯೋಜನೆಗಳಿಗೆ ಈಗ ಕಂಡೀಷನ್ಸ್ ಹಾಕುತ್ತಿದ್ದಾರೆ, ಈ ಯೋಜನೆಗಳು ನಮಗೆ ಸಿಗಲ್ಲ ಎಂದು ಜನರಿಗೆ ಈಗ ಅರ್ಥವಾಗುತ್ತಿದೆ. ಜನರಿಗೆ ಕಾಂಗ್ರೆಸ್ ವಂಚನೆ ಮಾಡಿದೆ ಎಂದು ಕಿಡಿಕಾರಿದರು. ಜನರಿಂದ ವೋಟ್ ಹಾಕಿಸಿಕೊಳ್ಳಲು ಕಾಂಗ್ರೆಸ್ ಎಲ್ಲಾ ಉಚಿತ ಎಂದು ಹೇಳಿತ್ತು, ಆದರೆ ಈಗ ಕಾಂಗ್ರೆಸ್ ಸರ್ಕಾರದ (Congress Govt) ವರಸೆ ಬದಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಜೂನ್ 11ರಿಂದ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ (Free travel) ಎಂದು ಹೇಳಿದೆ. ಇದರಿಂದ ಸಾರಿಗೆ ನಿಗಮಗಳಿಗೆ ಎಷ್ಟು ನಷ್ಟ ಆಗುತ್ತದೆ ಎಂದು ಮುಂದೆ ಗೊತ್ತಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read