ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಸ್ಥಾಪನೆಯಾಗಲಿವೆ.

ಬುಧವಾರದಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸಹಕಾರ ಸಂಘ ಈವರೆಗೂ ಇಲ್ಲದ ಗ್ರಾಮ ಮತ್ತು ಪಂಚಾಯಿತಿಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳನ್ನು ಸ್ಥಾಪಿಸಲಾಗುತ್ತದೆ.

ಸಹಕಾರ ಚಳುವಳಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದು ರೈತರ ಆದಾಯ ಹೆಚ್ಚಿಸಲು ನೆರವಾಗುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read