ಘಟಾನುಘಟಿಗಳಿಗೆ ಟಿಕೆಟ್ ಕೈತಪ್ಪುವ ಭೀತಿ; ಸ್ವಯಂ ನಿವೃತ್ತಿಗೆ ಮುಂದಾದ ಬಿಜೆಪಿ ಹಿರಿಯ ನಾಯಕರು….!

ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿರುವ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಬಿಜೆಪಿ ಘಟಾನುಘಟಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಅನಿವಾರ್ಯವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡುವ ಸಂದರ್ಭ ಎದುರಾಗಿದೆ.

ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದ ಬಿಜೆಪಿ ಹೈಕಮಾಂಡ್ ಇದೇ ಸಂದರ್ಭದಲ್ಲಿ ತಮ್ಮ ಚುನಾವಣಾ ರಾಜಕೀಯ ನಿವೃತ್ತಿಯನ್ನೂ ಸಹ ಘೋಷಿಸುವಂತೆ ಮಾಡಲಾಗಿತ್ತು. ಅದಾದ ಬಳಿಕ ಎಸ್.ಎ. ರವೀಂದ್ರನಾಥ್ ನಿವೃತ್ತಿ ಘೋಷಿಸಿದ್ದರು.

ನಂತರ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಹ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದು, ಇಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ದಿಢೀರ್ ಆಗಿ ತಮ್ಮ ಚುನಾವಣಾ ರಾಜಕೀಯದಿಂದ ನಿವೃತ್ತಿ ನಿರ್ಧಾರವನ್ನು ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಇನ್ನಷ್ಟು ಹಿರಿಯ ನಾಯಕರು ಇದೇ ನಡೆಯನ್ನು ಅನುಸರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತಿದ್ದು, ಹೀಗಾಗಿ ಹಿರಿಯ ನಾಯಕರು ಸ್ವಯಂ ಆಗಿ ಚುನಾವಣಾ ರಾಜಕೀಯ ಘೋಷಣೆ ಮಾಡುವಂತೆ ಸೂಚನೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read