ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಭಾನುವಾರದಂದು ನಡೆದಿದೆ.

ಸೊರಬ ತಾಲೂಕಿನ ಉಳವಿಯ ವಿಜಯ್ ಸಾಗರದಲ್ಲಿ ನಡೆಯುತ್ತಿರುವ ಮಾರಿ ಜಾತ್ರೆಗೆ ತಮ್ಮ ಕಾರಿನಲ್ಲಿ ಹೊರಟಿದ್ದು, ಈ ವೇಳೆ ಸಾಗರದ ಎಲ್ಐಸಿ ಕಚೇರಿ ಮುಂಭಾಗ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಹೀಗಾಗಿ ತಕ್ಷಣವೇ ಅವರು ಕಾರಿನಿಂದ ಕೆಳಗೆ ಇಳಿದಿದ್ದು, ಬಳಿಕ ಕಾರಿನ ಎಂಜಿನ್, ಬ್ಯಾಟರಿ ಹಾಗೂ ಮುಂಭಾಗ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣಕ್ಕೆ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read