HomeKarnatakaಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸರ್ಕಾರಿ ವೈದ್ಯ ಸಾವು

ಬೆಂಗಳೂರಿಂದ ಶಿವಮೊಗ್ಗಕ್ಕೆ ರೈಲಿನಲ್ಲಿ ಬರುತ್ತಿದ್ದ ಸರಕಾರಿ ವೈದ್ಯರೊಬ್ಬರು ಬೋಗಿಯ ಬಾಗಿಲ ಬಳಿ ನಿಂತಿದ್ದ ವೇಳೆ ಬಾಗಿಲು ತಾಗಿದ ಪರಿಣಾಮ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಬಳಿ ಶುಕ್ರವಾರ ಈ ಘಟನೆ ನಡೆದಿದ್ದು, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ 46 ವರ್ಷದ ಡಾ. ಗುರುರಾಜ್ ಮೃತಪಟ್ಟಿದ್ದಾರೆ.

ಮೂಲತಃ ದಾವಣಗೆರೆ ಜಿಲ್ಲೆ ನಲ್ಕುದುರೆಯವರಾದ ಗುರುರಾಜ್, ರಿಪ್ಪನ್ ಪೇಟೆ, ಗೌತಮಪುರ, ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular