HomeCrimeಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದಾಗಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

25 ವರ್ಷದ ಆಸಿಫ್ ಕೊಲೆಯಾದ ಯುವಕ. ಇಲಿಯಾಸ್ ನಗರದ ಜಬಿ (25) ಆರೋಪಿಯಾಗಿದ್ದಾನೆ. ಇಲಿಯಾಸ್ ನಗರದ ನೂರು ಅಡಿ ರಸ್ತೆಯಲ್ಲಿ ಚಾಕುವಿನಿಂದ ಚುಚ್ಚಿ ಆಸಿಫ್ ನನ್ನು ಕೊಲೆ ಮಾಡಲಾಗಿದ್ದು, ಆರೋಪಿ ಜಬಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular