HomeKarnatakaಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಾಟಾಳ್ ನಾಗರಾಜ್

ಚಾಮರಾಜನಗರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಾಟಾಳ್ ನಾಗರಾಜ್

ವಿಷಪೂರಿತ ಪ್ರಸಾದ ಸೇವನೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವಾಟಾಳ್ ಆಗ್ರಹ | Prajavani

ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕೂಡ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ತಮ್ಮ ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮುನ್ನ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಅಭಿಮಾನಿಗಳು ಈಡುಗಾಯಿ ಹೊಡೆದಿದ್ದು, ಬಳಿಕ ಅವರುಗಳೊಂದಿಗೆ ತೆರಳಿದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಾಟಾಳ್ ನಾಗರಾಜ್ ಈವರೆಗೆ 9 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, ಮೂರು ಬಾರಿ ಗೆದ್ದು ಆರು ಬಾರಿ ಸೋತಿದ್ದಾರೆ. ಇದು ಅವರ ಹತ್ತನೇ ಚುನಾವಣೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular