ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಟೈಟಲ್ ರಿವೀಲ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಹೆಚ್ಚಿದ ಸಂತಸ

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬವಾಗಿದ್ದು ತಮ್ಮ ನೆಚ್ಚಿನ ನಟನಿಗೆ ಶುಭ ಕೋರಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಮಾನಿಗಳ ಉತ್ಸಾಹ ಮೇರೆ ಮೀರಿದೆ.

ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಈ ಹಿಂದೆ ದರ್ಶನ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲವಾದರೂ ಈ ಬಾರಿ ಅಭಿಮಾನಿಗಳ ಪ್ರೀತಿಗೆ ಮಣಿದಿದ್ದಾರೆ. ಹೀಗಾಗಿ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರ ನಿವಾಸಕ್ಕೆ ಚಿತ್ರರಂಗದ ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳು ಆಗಮಿಸಿ ಶುಭ ಕೋರುತ್ತಿದ್ದಾರೆ.

ಇದರ ಮಧ್ಯೆ ದರ್ಶನ್ ಅವರ 56ನೇ ಚಿತ್ರದ ಶೀರ್ಷಿಕೆಯೂ ಈಗ ಹೊರ ಬಿದ್ದಿದ್ದು ಅಭಿಮಾನಿಗಳ ಖುಷಿ ಇಮ್ಮಡಿಸಿದೆ. ಹೊಸ ಚಿತ್ರಕ್ಕೆ ‘ಕಾಟೇರ’ ಎಂದು ಟೈಟಲ್ ಇಡಲಾಗಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರವನ್ನು ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ.

ಈ ಹಿಂದೆ ತರುಣ್ ಸುಧೀರ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಂಬಿನೇಷನಲ್ಲಿ ಮೂಡಿಬಂದಿದ್ದ ‘ರಾಬರ್ಟ್’ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು, ಹೀಗಾಗಿ ಇದೇ ಜೋಡಿಯ ಹೊಸ ಚಿತ್ರದ ಮೇಲೂ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read