ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮುಂತಕೆದಿರೇನಹಳ್ಳಿಯಲ್ಲಿ ಘಟನೆ ನಡೆದಿದೆ.
ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತ ಯುವಕರೆಲ್ಲರೂ ಸಂಬಂಧಿಕರಾಗಿದ್ದಾರೆ.
ಕೃಷಿಹೊಂಡದ ಬಳಿ ಮೋಟರ್ ರಿಪೇರಿ ಮಾಡುತ್ತಿದ್ದರು. ಹೀಗೆ ಅವರು ಕಾರ್ಯನಿರ್ವಹಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಮೂವರೂ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.