ಚಿತ್ರನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಕೆ; ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ

ಚಲನಚಿತ್ರ ನಟರ ಸ್ಮಾರಕಗಳಿಗೆ ಸಾರ್ವಜನಿಕ ಸಂಪನ್ಮೂಲ ಬಳಸುವುದಕ್ಕೆ ನಟ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿದಂತೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚಲನಚಿತ್ರ ಸ್ಟಾರ್ ಗಳು ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು.

ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್ ಗಳು ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ.

ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತು ಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read