HomeBusinessಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಲೆ

ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಬೆಲೆ

ಹಬ್ಬ, ಹರಿದಿನ ಶುಭ ಸಮಾರಂಭಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಚಿನ್ನ – ಬೆಳ್ಳಿ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಬೆಳ್ಳಿ ಬೆಲೆಯಲ್ಲಿಯೂ ಏರಿಕೆಯಾಗಿದೆ.

ಬುಧವಾರದಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನ (ಶುದ್ಧ) ದ ಬೆಲೆಯಲ್ಲಿ 1,030 ರೂಪಾಯಿ ಏರಿಕೆಯಾಗುವ ಮೂಲಕ 61,080 ರೂಪಾಯಿ ತಲುಪಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗಬಹುದು ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಇನ್ನು ಬೆಳ್ಳಿ ಬೆಲೆಯನ್ನು ಏರಿಕೆಯಾಗಿದ್ದು, ಪ್ರತಿ ಕೆಜಿಗೆ 1,810 ರೂಪಾಯಿ ಹೆಚ್ಚಳದೊಂದಿಗೆ 73,950 ರೂಪಾಯಿ ತಲುಪಿದೆ. ಜಾಗತಿಕ ಪ್ರಭಾವಗಳಿಂದಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular