HomeBusiness'ಚಿನ್ನ' ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಬಂಗಾರದ ಬೆಲೆಯಲ್ಲಿ ಏಕಾಏಕಿ ಏರಿಕೆ

‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್ ಶಾಕ್; ಬಂಗಾರದ ಬೆಲೆಯಲ್ಲಿ ಏಕಾಏಕಿ ಏರಿಕೆ

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದಕ್ಕೆ ಅಂತರಾಷ್ಟ್ರೀಯ ವಿದ್ಯಮಾನಗಳೇ ಕಾರಣ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಮತ್ತೆ ಇಳಿಕೆಯಾಗಿದ್ದು, ಇದೀಗ ಏಕಾಏಕಿ ಮತ್ತೆ ಏರಿದೆ.

ಬುಧವಾರದಂದು ಚಿನಿವಾರ ಪೇಟೆಯಲ್ಲಿ 10 ಗ್ರಾಂ ಬಂಗಾರದ ಬೆಲೆ 670 ರೂಪಾಯಿ ಏರಿಕೆಯಾಗುವ ಮೂಲಕ ಬರೋಬ್ಬರಿ 60,750 ರೂಪಾಯಿಗಳಾಗಿದೆ. ಮಂಗಳವಾರದಂದು ಚಿನ್ನದ ಬೆಲೆ 60,080 ರೂಪಾಯಿಗಳಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 1,150 ರೂಪಾಯಿ ಏರಿಕೆಯಾಗುವ ಮೂಲಕ 76,100 ರೂಪಾಯಿ ತಲುಪಿದೆ. ಚಿನ್ನ – ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿರುವುದು ಹಬ್ಬದ ಸಂದರ್ಭದಲ್ಲಿ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ನಿರಾಸೆಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular