HomeKarnatakaಚುನಾವಣಾ ಅಖಾಡಾಕ್ಕಿಂದು 'ನಮೋ' ಎಂಟ್ರಿ; 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ

ಚುನಾವಣಾ ಅಖಾಡಾಕ್ಕಿಂದು ‘ನಮೋ’ ಎಂಟ್ರಿ; 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರಂಗೇರುತ್ತಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಘಟಾನುಘಟಿ ನಾಯಕರುಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೂ ಸಹ ಸದ್ಯದಲ್ಲೇ ರಾಜ್ಯಕ್ಕೆ ಬರುತ್ತಿದ್ದು, ಅದಕ್ಕೂ ಮುನ್ನ ಇಂದು ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ 9:30ಕ್ಕೆ ನಡೆಯಲಿರುವ ಈ ವರ್ಚುಯಲ್ ಸಭೆಯಲ್ಲಿ 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಮಾತುಕತೆ ನಡೆಸಲಿದ್ದು, 58,112 ಬೂತ್, 1,680 ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.

ನಮೋ ಆಪ್ ಬಳಸುವ ಮೂಲಕ ಪ್ರಧಾನಿ ಅವರ ಜೊತೆ ಮಾತುಕತೆ ನಡೆಸಬಹುದಾಗಿದ್ದು, 18002090920 ಟೋಲ್ ಫ್ರೀ ನಂಬರ್ ಗೆ ಮಿಸ್ಡ್ ಕಾಲ್ ಕೊಡುವ ಮೂಲಕವೂ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇಂದಿನ ಸಭೆಯಲ್ಲಿ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಮೋದಿಯವರು ಮಾತುಕತೆ ನಡೆಸುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular