ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ; ಅಗತ್ಯ ಕ್ರಮ ಅನಿವಾರ್ಯವೆಂದ ಮುಖ್ಯ ಚುನಾವಣಾಧಿಕಾರಿ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ರಾಜ್ಯ ಸರ್ಕಾರ ಕೆಲವೊಂದು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಸುತ್ತಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿರುವ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ, ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ ಮಾಡಿದರೆ ಅಗತ್ಯ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆ ಕುರಿತಂತೆ ಮುಖ್ಯ ಚುನಾವಣಾ ಅಧಿಕಾರಿಗಳ ಸಹಮತಿ ಪಡೆಯಲು ಈ ಹಿಂದೆ ತಿಳಿಸಿದ್ದರೂ ಸಹ ಹಲವು ಇಲಾಖೆಗಳು ಇದನ್ನು ಪರಿಗಣಿಸುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ಪ್ರಕ್ರಿಯೆ ಮರುಕಳಿಸಿದಲ್ಲಿ ಅದನ್ನು ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read