ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಬಂಪರ್ ‘ಆಫರ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಇದರ ಮಧ್ಯೆಯೂ ತಮ್ಮ ತಮ್ಮ ಮತ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಮತದಾರದಿಂದ ಆಹ್ವಾನಗಳು ಬರುತ್ತಿವೆ.

ಈ ಹಿಂದೆ ಯಾದಗಿರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರೊಬ್ಬರು, ಸಿದ್ದರಾಮಯ್ಯ ಇಲ್ಲಿಂದ ಸ್ಪರ್ಧಿಸಿದರೆ ಅವರಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡುವುದರ ಜೊತೆಗೆ ತಾವು ಸಹ ಕಾಂಗ್ರೆಸ್ ಸೇರ್ಪಡೆಗೊಂಡು ಅವರ ಪರ ಪ್ರಚಾರ ಮಾಡುವುದಾಗಿ ಹೇಳಿದ್ದರು. ಅಲ್ಲದೆ ಸಿದ್ದರಾಮಯ್ಯನವರನ್ನು 50,000 ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುವುದಾಗಿ ತಿಳಿಸಿದ್ದರು.

ಇದೀಗ ರಾಯಚೂರು ಜಿಲ್ಲೆಯ ವ್ಯಕ್ತಿಯೊಬ್ಬರು ಸಿದ್ದರಾಮಯ್ಯನವರಿಗೆ ಮತ್ತೊಂದು ಆಫರ್ ನೀಡಿದ್ದು, ಸಿದ್ದರಾಮಯ್ಯ ಜಿಲ್ಲೆಯ ಯಾವುದಾದರೂ ಒಂದು ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ತಮ್ಮ ಎರಡು ಎಕರೆ ಹೊಲ ಮಾರಾಟ ಮಾಡಿ ದೇಣಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿಕ್ಕ ಹೆಸರೂರಿನ ಗ್ರಾಮ ಪಂಚಾಯಿತಿ ಸದಸ್ಯ ಶರಣು ಕಡ್ಡೋಣಿ ಈ ಆಫರ್ ನೀಡಿದ್ದು, ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ನಮ್ಮ ರಾಯಚೂರು ನಗರ ಮತ್ತು ಸಿಂಧನೂರು ಯಾವುದಾದರು ಒಂದು ಕ್ಷೇತ್ರಕ್ಕೆ ಬಂದು ಸ್ಪರ್ಧೆ ಮಾಡಿದರೆ ನನ್ನ ಪಾಲಿನ ಎರಡು ಎಕರೆ ಜಮೀನು, ಮಾರಾಟ ಮಾಡಿ ಬಂದಿರುವ ಹಣವನ್ನು ಅವರಿಗೆ ನೀಡಲು ಸಿದ್ದನಿದ್ದೇನೆ ಎಂದು ಘೋಷಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read