ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಈಗಾಗಲೇ ಈ ಕುರಿತು ಮಾತುಕತೆ ನಡೆದಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಬಿಟ್ಟು ಕೊಡಲಾಗುತ್ತದೆ ಎಂದು ಹೇಳಲಾಗಿದೆ.
ಇದರ ಮಧ್ಯೆ ಜೆಡಿಎಸ್ ನಡೆ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್ ಪಕ್ಷ, ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ “ಜಾತ್ಯಾತೀತತೆ”ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು “ಕಮಲ ದಳ” ಎಂದು ಬದಲಿಸಿಕೊಂಡರೆ ಒಳಿತು ! ಎಂದು ವ್ಯಂಗ್ಯವಾಡಿದೆ.
ಅಲ್ಲದೆ ಬಿಜೆಪಿಗೂ ಟಾಂಗ್ ನೀಡಿದ್ದು, ಬಿಜೆಪಿ ಈವರೆಗೆ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದೆ.