ಚುನಾವಣೆ ಮುಗಿಯುವವರೆಗೂ ಬೆಂಗಳೂರಿನಲ್ಲೇ ಅಮಿತ್ ಷಾ ವಾಸ್ತವ್ಯ; ಸರ್ಕಾರ ಮಾಡಿಯೇ ಹೋಗುತ್ತಾರಂತೆ ಚುನಾವಣಾ ಚಾಣಕ್ಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್. ಅಶೋಕ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದು, ತಮ್ಮ ಸ್ವಕ್ಷೇತ್ರ ಪದ್ಮನಾಭ ನಗರದ ಜೊತೆಗೆ ಡಿ.ಕೆ. ಶಿವಕುಮಾರ್ ಅವರ ಕನಕಪುರ ಕ್ಷೇತ್ರದಿಂದಲೂ ಕಣಕ್ಕಿಳಿಯುತ್ತಿದ್ದಾರೆ.

ಎರಡು ಕ್ಷೇತ್ರಗಳಲ್ಲಿ ತಮ್ಮ ಸ್ವರ್ಧೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರ್. ಅಶೋಕ್, ಪಕ್ಷ ನನಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಿದೆ. ಪದ್ಮನಾಭ ನಗರಕ್ಕಿಂತ ಕನಕಪುರ ಕ್ಷೇತ್ರದ ಕಡೆಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಹಾಗೂ ಪಕ್ಷದ ವರಿಷ್ಠರಾದ ಅಮಿತ್ ಷಾ ಅವರು, ಚುನಾವಣೆ ಮುಗಿಯುವವರೆಗೂ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕರ್ನಾಟಕದಲ್ಲಿ ಸರ್ಕಾರ ರಚಿಸಿದ ಬಳಿಕವೇ ನಾನು ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆಂದು ಅಶೋಕ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read