ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಬಹುತೇಕರಿಗೆ ‘ಗೆಲುವು’

ಪ್ರತಿ ಬಾರಿಯ ಚುನಾವಣೆಯಂತೆ ಈ ಬಾರಿಯೂ ಸಹ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಪರ್ವ ನಡೆದಿದ್ದು, ಇತರೆ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆಯಾಗಿ ಕಣಕ್ಕಿಳಿದಿದ್ದ ಬಹುತೇಕರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಲಕ್ಷ್ಮಣ ಸವದಿ ಅಥಣಿ ಕ್ಷೇತ್ರದಲ್ಲಿ, ಎನ್ ವೈ ಗೋಪಾಲಕೃಷ್ಣ ಮೊಳಕಾಲ್ಮೂರು ಕ್ಷೇತ್ರದಲ್ಲಿ, ರಾಜು ಕಾಗೆ ಕಾಗವಾಡದಲ್ಲಿ ಮತ್ತು ಎಚ್ ಡಿ ತಮ್ಮಯ್ಯ ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಅದೇ ರೀತಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶಿವಲಿಂಗೇಗೌಡ ಅರಸೀಕೆರೆಯಲ್ಲಿ, ವೀರೇಂದ್ರ ಕುಮಾರ್‌  (ಪಪ್ಪಿ) ಹಾಗೂ ಎಸ್ ಆರ್ ಶ್ರೀನಿವಾಸ್ ಗುಬ್ಬಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಆದರೆ ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ಇನ್ನು ಕಾಂಗ್ರೆಸ್ ತೊರೆದು ಅನ್ಯ ಪಕ್ಷಗಳನ್ನು ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಹುತೇಕರು ಸೋಲು ಕಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read