
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಲುಕಿರುವ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಿಸದಂತೆ ಈ ಹಿಂದೆ ನ್ಯಾಯಾಲಯ ಆದೇಶಿಸಿತ್ತು. ಹೀಗಾಗಿ ತಾವು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಕಾರಣ ಅನುಮತಿ ನೀಡುವಂತೆ ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.
ಇದೀಗ ನ್ಯಾಯಾಲಯ ಅನುಮತಿ ನಿರಾಕರಿಸಿದ್ದು ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ಮೂಲಕವೇ ವಿನಯ ಕುಲಕರ್ಣಿ ಪ್ರಚಾರ ಕಾರ್ಯ ನಡೆಸಬೇಕಿದೆ. ವಿನಯ ಕುಲಕರ್ಣಿ ಪರವಾಗಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಸೋಮವಾರದಂದು ನಾಮಪತ್ರ ಸಲ್ಲಿಸಿದ್ದಾರೆ.

