ಚೈತ್ರಾ ಕುಂದಾಪುರ ಹೆಣ್ಣಲ್ಲ ವಿಷ ಜಂತು; ಸಚಿವ ಭೈರತಿ ಸುರೇಶ್ ವಾಗ್ದಾಳಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಅವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಹಿಂದುತ್ವಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರು ಜೈಲು ಪಾಲಾಗಿದ್ದಾರೆ.

ಪ್ರಕರಣದ ತನಿಖೆ ನಡೆಸಿರುವ ಸಿಸಿಬಿ ಪೊಲೀಸರು, ಚೈತ್ರಾ ಕುಂದಾಪುರ ಮೊದಲಾದವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ನೀಡಲಾಗಿದೆ. ಇದರ ಮಧ್ಯೆ ಮಾಧ್ಯಮಗಳ ಜೊತೆ ಮಾತನಾಡಿರುವ ಚೈತ್ರಾ ಕುಂದಾಪುರ, ಪ್ರಕರಣದ ಮತ್ತೊಬ್ಬ ಆರೋಪಿ ಅಭಿನವ ಹಾಲಸ್ವಾಮಿ ಬಂಧನದ ಬಳಿಕ ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಇನ್ನು ಈ ಪ್ರಕರಣದ ಕುರಿತಂತೆ ಕೋಲಾರ ಜಿಲ್ಲೆ, ಮಾಲೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಜಾತಿ ಜನಾಂಗಗಳ ನಡುವೆ ಜಗಳ ತಂದಿಡುವ ಹಿಂದುತ್ವ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹೆಣ್ಣಲ್ಲ ವಿಷ ಜಂತು ಎಂದು ಕಿಡಿ ಕಾರಿದ್ದಾರೆ.

ಪ್ರಚೋದನಕಾರಿಯಾಗಿ ಭಾಷಣ ಮಾಡುವ ಮೂಲಕ ಕೋಮು ಸಂಘರ್ಷಕ್ಕೆ ಕಾರಣವಾಗುವ ಆಕೆ ಜೈಲಿನಲ್ಲಿರಲು ಲಾಯಕ್ಕು ಎಂದಿರುವ ಸಚಿವರು, ಮೋಸ, ದ್ರೋಹ ಬಗೆಯುವವರು ಯಾವುದೇ ಪಕ್ಷದವರಿರಲಿ ಅವರು ಒಂದಲ್ಲ ಒಂದು ದಿನ ಜೈಲಿಗೆ ಹೋಗುವುದು ಖಚಿತ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read