ಚೈತ್ರಾ ಹೆಸರಿನ ಮುಂದೆ ಕುಂದಾಪುರ ಪದ ಬಳಕೆ; ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟಿಗೆ ವಕೀಲರ ಮೊರೆ

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದ ವರದಿ ಮಾಡುತ್ತಿರುವ ಮಾಧ್ಯಮಗಳಲ್ಲಿ ಪ್ರಮುಖ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಅವರ ಹೆಸರಿನ ಮುಂದೆ ಕುಂದಾಪುರ ಪದವೂ ಬಳಕೆಯಾಗುತ್ತಿದ್ದು, ಇದಕ್ಕೆ ಈಗ ವಕೀಲರೊಬ್ಬರು ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಚೈತ್ರಾ ಹೆಸರಿನ ಮುಂದೆ ಕುಂದಾಪುರ ಬಳಸದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಪವನ ಚಂದ್ರಶೆಟ್ಟಿ ಕುಂದಾಪುರ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಕೂಡಾ ಕುಂದಾಪುರದ ನಾಗರಿಕರು, ಚೈತ್ರಾ ಹೆಸರಿನ ಮುಂದೆ ಕುಂದಾಪುರ ಬಳಸುವುದು ಬೇಡ ಎಂದು ಮನವಿ ಮಾಡಿದ್ದು, ಇದೀಗ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read