ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆ ಹಿಂದೆ ಕಾಂಗ್ರೆಸ್ ನಾಯಕರಲ್ಲಿದೆ ಈ ‘ಲೆಕ್ಕಾಚಾರ’

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಬಿ ಫಾರಂ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಮತ್ತಷ್ಟು ಬಲ ಬರಲಿದೆ ಎಂಬ ಲೆಕ್ಕಾಚಾರ ನಾಯಕರಲ್ಲಿದೆ.

ಅದರಲ್ಲೂ ವೀರೇಂದ್ರ ಪಾಟೀಲ್ ಬಳಿಕ ಲಿಂಗಾಯತ ಸಮುದಾಯ ಕಾಂಗ್ರೆಸ್ ಬೆಂಬಲದಿಂದ ಹಿಂದೆ ಸರಿದಿದ್ದು, ಯಡಿಯೂರಪ್ಪನವರ ಕಾರಣಕ್ಕೆ ಬಿಜೆಪಿ ಬೆನ್ನಿಗಿದ್ದರು. ಆದರೆ ಯಡಿಯೂರಪ್ಪನವರನ್ನು ಅವಮಾನಕರ ರೀತಿಯಲ್ಲಿ ಮುಖ್ಯಮಂತ್ರಿ ಪದವಿಯಿಂದ ಇಳಿಸಿದ ಬಳಿಕ ಅಸಮಾಧಾನಗೊಂಡಿರುವ ಆ ಸಮುದಾಯ, ಇದೀಗ ಶೆಟ್ಟರ್ ಕಾರಣಕ್ಕೆ ಬಿಜೆಪಿಯಿಂದ ಮತ್ತಷ್ಟು ದೂರ ಸರಿಯಬಹುದು ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಜೊತೆಗೆ ಲಕ್ಷ್ಮಣ ಸವದಿ ಸೇರಿದಂತೆ ಹಲವರು ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಯನ್ನು ಲಿಂಗಾಯಿತ ವಿರೋಧಿ ಎಂದು ಬಿಂಬಿಸಬಹುದು ಎಂಬ ಚಿಂತನೆ ಕಾಂಗ್ರೆಸ್ ನಾಯಕರಲ್ಲಿದೆ ಎನ್ನಲಾಗಿದೆ. ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಅವರ ನಿರ್ಗಮನದಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದು ಆ ಪಕ್ಷದ ನಾಯಕರುಗಳು ಹೇಳುತ್ತಿದ್ದರಾದರೂ ಸಹ ವಿಧಾನಸಭಾ ಚುನಾವಣೆಯಲ್ಲಿ ಒಂದಷ್ಟು ಪರಿಣಾಮ ಬೀರುವುದು ಖಚಿತ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read