HomeKarnatakaಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸಚಿವ ಡಿ. ಸುಧಾಕರ್: ಸಿಎಂ ಸಿದ್ಧರಾಮಯ್ಯ ಕಂಬನಿ

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸಚಿವ ಡಿ. ಸುಧಾಕರ್: ಸಿಎಂ ಸಿದ್ಧರಾಮಯ್ಯ ಕಂಬನಿ

ಬೆಂಗಳೂರು: ಹಿರಿಯೂರು ಶಾಸಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು ಎಂದು ಸಿಎಂ ತಿಳಿಸಿದ್ದಾರೆ.

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular