ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ; ಮೈದುಂಬುತ್ತಿರುವ ಜಲಾಶಯಗಳು…!

ಈ ಬಾರಿ ಮುಂಗಾರು ರಾಜ್ಯಕ್ಕೆ ವಿಳಂಬವಾಗಿ ಪ್ರವೇಶಿಸಿದ್ದು, ಆರಂಭದ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಆದರೆ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರ ವರ್ಷಧಾರೆಯಾಗುತ್ತಿರುವ ಕಾರಣ ಜಲಾಶಯಗಳು ಮೈದುಂಬಿಕೊಳ್ಳುತ್ತಿವೆ.

ಕೊಡಗಿನಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡದಲ್ಲಿ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಒಂದೇ ದಿನದಲ್ಲಿ ಒಳಹರಿವು ದುಪ್ಪಟ್ಟಾಗಿದ್ದು, ವಾರದಲ್ಲಿ ಎರಡು ಅಡಿ ನೀರು ಹೆಚ್ಚಳವಾದಂತಾಗಿದೆ. ತುಂಗಾ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿರುವ ಕಾರಣ 22 ಕ್ರಸ್ಟ್ ಗೇಟ್ ಗಳ ಪೈಕಿ 10 ಗೇಟ್ ಗಳನ್ನು ತೆರೆಯಲಾಗಿದೆ. ಇನ್ನು ಶರಾವತಿ ಜಲನಯನ ಪ್ರದೇಶದಲ್ಲೂ ಸಹ ವ್ಯಾಪಕ ಮಳೆಯಾಗುತ್ತಿದೆ.

ರಾಜ್ಯದ ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗುತ್ತಿರುವುದರಿಂದ ಹಳ್ಳಕೊಳ್ಳಗಳು, ಕೆರೆ, ನದಿಗಳು ನಿಧಾನವಾಗಿ ತುಂಬಿಕೊಳ್ಳಲಾರಂಭಿಸಿದ್ದು, ಮುಂದಿನ ದಿನಗಳಲ್ಲೂ ಮಳೆ ಇದೇ ರೀತಿ ಮುಂದುವರೆದರೆ ಅನುಕೂಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿಂದೆ ಮಳೆ ತೀವ್ರವಾಗಿ ಕಡಿಮೆಯಾದ ಕಾರಣ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಆತಂಕದ ಜೊತೆಗೆ ರೈತರು ಬೆಳೆ ನಷ್ಟ ಅನುಭವಿಸುವ ಸಾಧ್ಯತೆ ಇತ್ತು. ಆದರೆ ಮಳೆ ಕಣ್ಣಾಮುಚ್ಚಾಲೆ ಆಟ ಆಡಿದರೆ ಸಮಸ್ಯೆಯಾಗಲಿದೆ. ಹೀಗಾಗಿ ಎಲ್ಲರೂ ಮಳೆ ಇದೇ ರೀತಿ ಮುಂದುವರಿಯಲಿ. ಈ ಮೂಲಕ ಹಳ್ಳ ಕೊಳ್ಳಗಳು, ಕೆರೆಕಟ್ಟೆ, ನದಿಗಳು ತುಂಬಿ ಹರಿಯಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read