ಜಾಕ್ವೆಲಿನ್ ಫರ್ನಾಂಡಿಸ್ ಗೆ ತಾತ್ಕಾಲಿಕ ರಿಲೀಫ್; ದುಬೈಗೆ ತೆರಳಲು ಕೋರ್ಟ್ ಗ್ರೀನ್ ಸಿಗ್ನಲ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರನ್ ಜೊತೆ ಆರೋಪಿಯಾಗಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೆಹಲಿ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಿದೆ.

ಸಮಾರಂಭ ಒಂದರಲ್ಲಿ ಭಾಗವಹಿಸುವ ಸಲುವಾಗಿ ತಾವು ದುಬೈಗೆ ತೆರಳಬೇಕಾಗಿರುವುದರಿಂದ ಇದಕ್ಕೆ ಅನುಮತಿ ನೀಡಬೇಕೆಂದು ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿ ಸಲ್ಲಿಸಿದ್ದು ಇದಕ್ಕೆ ಶುಕ್ರವಾರದಂದು ನ್ಯಾಯಾಲಯದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಜಾಕ್ವೆಲಿನ್ ಫರ್ನಾಂಡಿಸ್ ವಿದೇಶಿ ಪ್ರಜೆಯಾಗಿರುವ ಕಾರಣ ವಿದೇಶಕ್ಕೆ ತೆರಳಲು ಅವರಿಗೆ ಅನುಮತಿ ನೀಡಬಾರದೆಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯದ ಷರತ್ತುಗಳಿಗೆ ಬದ್ಧವಾಗಿರುವುದಾಗಿ ಜಾಕ್ವೆಲಿನ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ವಿದೇಶ ಪ್ರವಾಸಕ್ಕೆ ಅನುಮತಿ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read