ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಎಲ್ಲ ವೈದ್ಯಕೀಯ ಪರೀಕ್ಷೆಗಳೂ ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ವಿರುದ್ಧವಾಗಿದ್ದು, ಹೀಗಾಗಿ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣದ ಹಿನ್ನೆಲೆ: 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ದಾಖಲಾಗಿದ್ದು, ಸೆಪ್ಟೆಂಬರ್ 1ರಂದು ಚಿತ್ರದುರ್ಗದಲ್ಲಿ ಬಂಧಿಸಲಾಗಿತ್ತು. ಅಂದಿನಿಂದಲೂ ಅವರು ನ್ಯಾಯಾಂಗ ವಶದಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read