ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ದಸರಾ ನಂತರ ಅಕ್ಟೋಬರ್- ನವೆಂಬರ್ ನಲ್ಲಿ ಎಲೆಕ್ಷನ್ ಸಾಧ್ಯತೆ

ತುಮಕೂರು: ಸರ್ಕಾರ ಮೀಸಲಾತಿ ಪಟ್ಟಿ ನೀಡಿದಲ್ಲಿ ಅಕ್ಟೋಬರ್ -ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ,ಎಸ್, ಸಂಗ್ರೇಶಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 30ರೊಳಗೆ ಮೀಸಲಾತಿ ಪಟ್ಟಿಯನ್ನು ನೀಡುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಿಗೆ ಸರ್ಕಾರ ಮೀಸಲಾತಿ ನಿಗದಿಪಡಿಸಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಮೇ 30ರೊಳಗೆ ಮೀಸಲಾತಿ ಪಟ್ಟಿ ನೀಡುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಿದ್ದಾರೆ.

ಮೀಸಲಾತಿ ಪಟ್ಟಿಗಾಗಿ ಕಾಯುತ್ತಿದ್ದು ಮೀಸಲಾತಿ ಪಟ್ಟಿ ನೀಡಿದ ಕೂಡಲೇ ಚುನಾವಣೆಗೆ ಸಿದ್ಧತೆ ಆರಂಭಿಸಲಾಗುವುದು. ಸಿದ್ಧತೆ ಮತ್ತು ಚುನಾವಣಾ ತಯಾರಿಗೆ ಎರಡು ಮೂರು ತಿಂಗಳು ಬೇಕಾಗುತ್ತದೆ. ಹೀಗಾಗಿ ದಸರಾ ನಂತರ ಈ ವರ್ಷದ ನವೆಂಬರ್ ನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read