ಬೆಂಗಳೂರು : ನೂತನ ಸಿಎಂ ಸಿದ್ದರಾಮಯ್ಯ (CM Siddaramaiah ) ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ (Budget) ಮಂಡನೆ ಮಾಡಲಿದ್ದಾರೆ.
ಕಾಂಗ್ರೆಸ್ ಸರ್ಕಾರದ ಮೊದಲ ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಆರಂಭದಲ್ಲಿ (Governor) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ. ಗ್ಯಾರಂಟಿ ಘೋಷಣೆ ವಿಚಾರ ಚರ್ಚೆಯಲ್ಲಿರುವಾಗಲೇ ಬಜೆಟ್ ಮಂಡನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಬಹಳ ನಿರೀಕ್ಷೆಯಿದೆ.