HomeKarnatakaಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ - ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಪರ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಷಾ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೊದಲಾದ ನಾಯಕರುಗಳು ಪ್ರಚಾರ ನಡೆಸುತ್ತಿದ್ದು, ಜೆಡಿಎಸ್ ಪರವಾಗಿ ಮಾಜಿ ಪ್ರಧಾನಿ ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ.

ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮೇ ಮೊದಲ ವಾರದಂದು ಆಗಮಿಸಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಮತಾ ಬ್ಯಾನರ್ಜಿಯವರು ಬೆಂಗಳೂರು ಹಾಗೂ ಮೈಸೂರು ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದರೆ, ಕೆ. ಚಂದ್ರಶೇಖರ ರಾವ್ ಅವರು ಚಿಕ್ಕಬಳ್ಳಾಪುರ, ಕೋಲಾರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular