HomeKarnatakaಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮತ್ತೆ ಮಾತೃ ಪಕ್ಷಕ್ಕೆ ಮರಳಲು ಒಲವು....!

ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮತ್ತೆ ಮಾತೃ ಪಕ್ಷಕ್ಕೆ ಮರಳಲು ಒಲವು….!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡು ಬಸವಕಲ್ಯಾಣ ಕ್ಷೇತ್ರದಿಂದ ಕಣಕ್ಕಿಳಿದು ಪರಾವಗೊಂಡಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಮಾತೃ ಪಕ್ಷಕ್ಕೆ ಮರಳಲು ತೀರ್ಮಾನಿಸಿದ್ದಾರೆ. ಈ ಕುರಿತು ಮಲ್ಲಿಕಾರ್ಜುನ ಖೂಬಾ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ನಾನು ಜೆಡಿಎಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗುವ ಮೂಲಕ ತಪ್ಪು ಮಾಡಿದೆ. ಹೀಗಾಗಿ ಅತಿ ಶೀಘ್ರದಲ್ಲಿಯೇ ಮತ್ತೆ ಜೆಡಿಎಸ್ ಗೆ ಮರಳುತ್ತೇನೆ ಎಂದು ಹೇಳಿದ ಅವರು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಬಿಜೆಪಿ ನನಗೆ ಯಾವುದೇ ಸಹಕಾರ ನೀಡಿಲ್ಲ, ಸ್ಥಾನಮಾನ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ ಮಲ್ಲಿಕಾರ್ಜುನ ಖೂಬಾ ಆ ಪಕ್ಷದ ಅಭ್ಯರ್ಥಿಯಾಗಿ ಬಸವಕಲ್ಯಾಣದಿಂದ ಕಣಕ್ಕಿಳಿದಿದ್ದು ಪರಾಭವಗೊಂಡಿದ್ದರು. ನಂತರ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದ್ದು, ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular