ಟಿಕೆಟ್ ಕೈತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್….!

ಕಳೆದ ರಾತ್ರಿ ಬಿಜೆಪಿ 189 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಉಡುಪಿ ಕ್ಷೇತ್ರದ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ ಕೊಕ್ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ಅನ್ನು ಯಶಪಾಲ್ ಸುವರ್ಣ ಅವರಿಗೆ ನೀಡಲಾಗಿದೆ.

ಈ ಬಾರಿ ಸ್ಪರ್ಧೆಗೆ ತಮಗೆ ಅವಕಾಶ ಸಿಗಬಹುದು ಎಂದು ಭಾವಿಸಿ ಪ್ರಚಾರ ಕಾರ್ಯದಲ್ಲೂ ತೊಡಗಿಕೊಂಡಿದ್ದ ರಘುಪತಿ ಭಟ್ ಅವರಿಗೆ ಈ ವಿಚಾರ ಆಘಾತ ತಂದಿದ್ದು, ಮಾಧ್ಯಮಗಳ ಜೊತೆ ಮಾತನಾಡುವಾಗ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಮುಂದೆಯೇ ಕಣ್ಣೀರಿಟ್ಟಿದ್ದಾರೆ.

ನಿಷ್ಠಾವಂತ ಕಾರ್ಯಕರ್ತನಾಗಿದ್ದ ತಮ್ಮನ್ನು ಪಕ್ಷ ಈ ರೀತಿ ನಡೆಸಿಕೊಂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಕಷ್ಟಕಾಲದಲ್ಲಿ ನಾನು ಬೇಕಾಗಿದ್ದು, ಇದೀಗ ಬೇಡವಾಗಿದ್ದೇನೆ ಎಂದು ಕಣ್ಣೀರಿಟ್ಟರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read