ಟಿಕೆಟ್ ಕೈತಪ್ಪುವ ಭೀತಿ; BSY ಭೇಟಿಯಾದ ಅರವಿಂದ ಲಿಂಬಾವಳಿ

ಮಂಗಳವಾರದಂದು ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಂಗಳೂರಿನ ಮಹದೇವಪುರ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ.

ಮಹದೇವಪುರದ ಹಾಲಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇನ್ನು ಲಂಚ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಟಿಕೆಟ್ ಕೈ ತಪ್ಪುವುದು ನಿಶ್ಚಿತವಾಗಿದ್ದು, ಈ ಕ್ಷೇತ್ರದಲ್ಲಿ ಅವರ ಪುತ್ರ ಮಲ್ಲಿಕಾರ್ಜುನ ಆಕಾಂಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಕೂಡ ಯಡಿಯೂರಪ್ಪನವರನ್ನು ಭೇಟಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read