HomeKarnatakaಟಿಕೆಟ್ 'ಕೈ' ತಪ್ಪಿದ ಬೆನ್ನಲ್ಲೇ ರಘು ಆಚಾರ್ ಮಹತ್ವದ ತೀರ್ಮಾನ; ಜೆಡಿಎಸ್ ಸೇರ್ಪಡೆಗೆ ಸಿದ್ಧತೆ

ಟಿಕೆಟ್ ‘ಕೈ’ ತಪ್ಪಿದ ಬೆನ್ನಲ್ಲೇ ರಘು ಆಚಾರ್ ಮಹತ್ವದ ತೀರ್ಮಾನ; ಜೆಡಿಎಸ್ ಸೇರ್ಪಡೆಗೆ ಸಿದ್ಧತೆ

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್, ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರ ಜೊತೆ ಚರ್ಚೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಏಪ್ರಿಲ್ 14ರಂದು ಜೆಡಿಎಸ್ ಸೇರ್ಪಡೆಗೆ ನಿರ್ಧರಿಸಿದ್ದು, ಎಚ್.ಡಿ. ಕುಮಾರಸ್ವಾಮಿಯವರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಚಿತ್ರದುರ್ಗ ಕ್ಷೇತ್ರದ ಜೆಡಿಎಸ್ ಟಿಕೆಟ್ ಬಹುತೇಕ ಅವರಿಗೇ ಸಿಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್, ಕಳೆದ ಒಂದು ವರ್ಷದಿಂದಲೂ ಕ್ಷೇತ್ರದಲ್ಲಿ ಮತದಾರರ ಜೊತೆ ಸಂಪರ್ಕದಲ್ಲಿದ್ದರು. ಆದರೆ ಇತ್ತೀಚೆಗಷ್ಟೇ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬಂದಿರುವ ವೀರೇಂದ್ರ ಅವರಿಗೆ ಟಿಕೆಟ್ ಸಿಕ್ಕಿರುವ ಹಿನ್ನೆಲೆಯಲ್ಲಿ ರಘು ಆಚಾರ್ ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular