ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ವರಿಷ್ಠರ ಜೊತೆ ಮಾತನಾಡಿದ್ದಾರೆ ಎಂದು ಜಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಬೆಂಗಳೂರಲ್ಲಿ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ನಾಯಕರು, ಪಕ್ಷ ಸಂಘಟನೆ ಮಾಡಿದ್ದಾರೆ. ಕೆ.ಎಸ್. ಈಶ್ವರಪ್ಪ ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಲಿದ್ದಾರೆ.
ಟಿಕೆಟ್ ಸಿಗದಿದ್ದಾಗ ಅಸಮಾಧಾನಗೊಳ್ಳುವುದು ಸಹಜ. ನಾಯಕರು ಅಸಮಾಧಾನಗೊಂಡವರ ಮನವೊಲಿಕೆ ಮಾಡಲಿದ್ದಾರೆ ಎಂದರು.
ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಹುಬ್ಬಳ್ಳಿ- ಧಾರವಾಡ ಕೇಂದ್ರ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡದೇ ಕುತೂಹಲ ಹುಟ್ಟಿಸಿದೆ. ಈಗಾಗಲೇ ವರಿಷ್ಠರು ಜಗದೀಶ್ ಶೆಟ್ಟರ್ ಗೆ ಸ್ಪರ್ಧಿಸದಂತೆ ಸೂಚನೆ ನೀಡಿದ್ದು, ಶೆಟ್ಟರ್ ಮಾತ್ರ ರೆಬೆಲ್ ಆಗಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.