HomeKarnatakaಟ್ರೇಡ್ ಲೈಸನ್ಸ್ ಗೆ ಲಂಚ; ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಜ್ ಮಾಡಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಟ್ರೇಡ್ ಲೈಸನ್ಸ್ ಗೆ ಲಂಚ; ಅಧಿಕಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಜ್ ಮಾಡಿ ಬಂಧಿಸಿದ ಲೋಕಾಯುಕ್ತ ಪೊಲೀಸರು

ಬೆಂಗಳೂರು: ಟ್ರೇಡ್ ಲೈಸನ್ಸ್ ಗಾಗಿ ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕನನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಆಹಾರ ನಿರೀಕ್ಷಕ ಮಹಾಂತೇಗೌಡ ಬಂಧಿತ ಅಧಿಕಾರಿ. ಕೆ.ಜಿ. ಸರ್ಕಲ್ ಬಳಿ ಇರುವ ತಹಶೀಲ್ದಾರ್ ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿರುವ ಮಹಾಂತೇಗೌಡ, ರಂಗಧಾಮಯ್ಯ ಬಳಿ 1 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಮುಂಗಡವಾಗಿ 43 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರನ್ನು ನೋಡುತ್ತಿದ್ದಂತೆ ಮಹಂತೇಗೌಡ ಕಾರಿನಲ್ಲಿ ಪರಾರಿಯಾಗಿದ್ದಾರೆ. ಬೆನ್ನಟ್ಟಿದ ಪೊಲೀಸರು ಸುಮಾರು 15 ಕಿ.ಮೀ ಚೇಸ್ ಮಾಡಿ ಕಾರು ಅಡ್ಡಗಟ್ಟಿ ಸೆರೆ ಹಿಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular